ಮೈಸೂರು : ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಪೊಲೀಸರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮೈಸೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.