ಬೆಂಗಳೂರು : ಬೆಂಗಳೂರು ಕಾಲ್ತುಳಿತದ ದುರಂತದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ ಬಂದಿದ್ದು, ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ದೆಹಲಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರು ಕಾಲ್ತುಳಿತ ದುರಂತದಿಂದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಘಟನೆ ನಡೆದ ದಿನ ಪ್ರಾಥಮಿಕ ಮಾಹಿತಿ ಪಡೆದ ವರಿಷ್ಟರು ಇದೀಗ ಸಂಪೂರ್ಣ ವರದಿ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.