ಮೈಸೂರು : ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿರುವಾಗಲೇ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದು, 5 ವರ್ಷಗಳ ಕಾಲ ನಮ್ಮ ತಂದೆಯೇ ಸಿಎಂ ಎಂದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸ್ತಾರೆ. ಪಕ್ಷದಲ್ಲಿ ಈಗ ಎಲ್ಲೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗ್ತಿಲ್ಲ. ಮಾಧ್ಯಮಗಳಲ್ಲಿ ಮಾತ್ರ ನಾಯಕತ್ವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಮ್ಮಲ್ಲಿ ಈಗ ಯಾವುದೇ ಗೊಂದಲ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.








