ಬೆಂಗಳೂರು : ಆಧಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಪ್ರಕರಣದ ರದ್ದು ಕೋರಿ ಹೈಕೋರ್ಟ್ ಗೆ ಈಶ್ವರಪ್ಪ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಪ್ರಾಥಮಿಕ ತನಿಖೆ ನಡೆಸದೇ ಎಫ್ ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಬಂಧನದ ಭೀತಿ ಎಂದು ಈಶ್ವರಪ್ಪ ಪರ ಹರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದಾರೆ.
ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಏಕಸದಸ್ಯ ಪೀಠ ನೋಟಿಸ್ ನೀಡಿದೆ. ಮುಂದಿನ ವಿಚಾರಣೆವರೆಗೆ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.