ಬೆಂಗಳೂರು : ಕೋಲಾರದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.
2023ರ ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಶ್ರೀನಿವಾಸ್ ಅವರನ್ನು ಹತ್ಯೆ ಮಾಡಿದ್ದರು. ಶ್ರೀನಿವಾಸ್ ಪತ್ನಿ ಡಾ.ಚಂದ್ರಕಲಾ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಹೈಕೋರ್ಟ್ ಗೆ ಮನವಿ ಮಾಡಿದ್ದರು.
ಚಂದ್ರಕಲಾ ಅವರ ಮನವಿ ಪುರಸ್ಕರಿಸಿರುವ ಹೈಕೋರ್ಟ್ ಇಂದು ಶ್ರೀನಿವಾಸ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆದೇಶ ನೀಡಿದೆ.