ಮೈಸೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ನೀಡದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದು, ಸಾವಿರಾರು ಅಭಿಮಾನಿಗಳು ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ನಿಂತಿದ್ದಾರೆ.
ಮೈಸೂರು ಏರ್ ಪೋರ್ಟ್ ನಲ್ಲಿ ಹೈಡ್ರಾಮಾ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಆಪ್ತ, ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನಡೆದಿದೆ.
ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮರಿಗೌಡರನ್ನು ಕಂಡ ಕಾರ್ಯಕರ್ತರು, ದಿಕ್ಕಾರ ದಿಕ್ಕಾರ ಮರಿಗೌಡಗೆ ದಿಕ್ಕಾರ, ಸಿಎಂ ಸಿದ್ದರಾಮಯ್ಯಗೆ ಈ ಸ್ಥಿತಿ ಬರಲು ನೀನೆ ಕಾರಣ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ವಾಪಸ್ ಕಳಿಸಿದ್ದಾರೆ.