ಬೆಳಗಾವಿ : ಅಂಬೇಡ್ಕರ್ ಭಾವಚಿತ್ರ ಹಿಡಿದು ಇಂದು ಸದನದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ MLC ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿ ಇದೀಗ, ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಸುವರ್ಣಸೌಧದ ಮೊಗಸಾಲೇಯಲ್ಲಿ ಭಾರಿ ಹೈಡ್ರಾಮಾ ನಡೆಯಿತು.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿಟಿ ರವಿ ಮೇಲೆ ಹಲ್ಲಿಗೆ ಯತ್ನಿಸಲಾಗಿದೆ ಎನ್ನಲಾಗಿದೆ.
ಇದಕ್ಕೂ ಮೊದಲು, ಬೆಳಗಾವಿಯ ಸುವರ್ಣಸೌಧದ ಬಳಿ ಎಂಎಲ್ಸಿ ಸಿಟಿ ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಘೋಷಣೆ ಕೂಗಿ ಧಿಕ್ಕಾರ ಕೂಗಿದರು. ಬಿಜೆಪಿಯ ಎಂ.ಎಲ್ ಸಿ ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಘೋಷಣೆ ಕೂಗಿದರು.ಅಶ್ಲೀಲ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿಟಿ ರವಿಗೆ ಮುತ್ತಿಗೆ ಹಾಕಲಾಯಿತು.
ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಘೋಷಣೆ ಕೂಗಿದರು. ಸುವರ್ಣ ಸೌಧದ ಬಳಿ ಎಂಎಲ್ಸಿ ಸೀಟಿ ರವಿಗೆ ಮುತ್ತಿಗೆ ಹಾಕಲು ಹೆಬ್ಬಾಳ್ಕರ್ ಬೆಂಬಲಿಗರು ಮುತ್ತಿಗೆ ಹಾಕಿದರು.ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.