ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್ ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಕುರಿತು ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆಗೆ ಮಾಡುತ್ತೇವೆ. ನಾನು ಸಿಎಂ ಸಿದ್ದರಾಮಯ್ಯ ಜೊತೆಗೆನ್ನತ ಮಟ್ಟದ ತನಿಖೆ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಚಾರ ಭಾರಿ ಸದ್ದು ಗದ್ದಲವನ್ನು ಉಂಟು ಮಾಡಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಅದೇಶಿಸಿದರು. ಬಳಿಕ ಪರಿಷತ್ ನಲ್ಲೂ ಇದೆ ವಿಚಾರ ಪ್ರಸ್ತಾಪವಾದಾಗ ಸಿಎಂ ಸಿದ್ದರಾಮಯ್ಯ ಇದರ ಹಿಂದೆ ಬಿಜೆಪಿ, ಜೆಡಿಎಸ್, ಕಾಂಗ್ರೆಸನವರು ಯಾರೇ ಇದ್ದರೂ ಸುಮ್ನೆ ಬಿಡಲ್ಲ ಈ ಕುರಿತು ಉನ್ನತ ಮಟ್ಟದ ತನಿಖೆ ಮಾಡುತ್ತೇವೆ ಎಂದು ತಿಳಿಸಿದ್ದರು.