ಬೆಂಗಳೂರು : ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಇಂದು ಬೆಳಗಿನಜಾವ ಐಷಾರಾಮಿ ಲಾಂಬೊರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿ ಅಪಾಯಕಾರಿ ಚಾಲನೆ ಮಾಡಿದ್ದು, ಈ ಸಂಬಂಧ ಅಪರಿಚಿತ ಕಾರು ಚಾಲಕನ ವಿರುದ್ಧ ಕಬ್ಬನ್ ಪಾರ್ಕ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಬೆಳಗಿನಜಾವ 2 ಗಂಟೆ ಸುಮಾರಿಗೆ ಲಾಂಬೊರ್ಗಿನಿ ಕಾರು ಅನಿಲ್ ಕುಂಬ್ಳೆ ವೃತ್ತದ ಬಳಿ ಬಂದಿತ್ತು. ಈ ವೇಳೆ ಕಾರು ಡ್ರಿಫ್ಟಿಂಗ್ ಮಾಡಿದೆ. ಇದನ್ನು ಕಂಡು ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಮಾಹಿತಿ ಆಧರಿಸಿ ಕಬ್ಬನ್ ಪಾರ್ಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ಪರಿಶೀಲನೆ ವೇಳೆ KA-05 NR 0009 ನಂಬರ್ನ ಲ್ಯಾಂಬೋರ್ಗಿನಿ ಕಾರು ಎಂಬುದು ಗೊತ್ತಾಗಿದೆ. ಕಾರಿನ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದ್ದು, ಅಜಾಗರೂಕತೆ ಹಾಗೂ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
#Bengaluru: #Lamborghini performs dangerous stunts in the middle of the road under the flyover at Anil Kumble Circle on MG Road, video goes viral. pic.twitter.com/mIexhgKUM1
— Siraj Noorani (@sirajnoorani) March 21, 2026








