ಮಂಗಳೂರು : ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಇಂದಿನಿಂದ ಮೇ.6 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.
ಇಂದು ಮಂಗಳೂರಿನಲ್ಲಿ ಕಿಡಿಗೇಡಿಗಳು ಮೂರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದ ಬಳಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.