ಮಂಗಳೂರು: ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೂ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಮಂಗಳೂರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ ಕಮಿಷನರ್ ಕಚೇರಿಯಲ್ಲಿ 11ಗಂಟೆಗೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆ ಪೊಲೀಸರ ಜೊತೆಗೆ ಜಿ ಪರಮೇಶ್ವರ್ ಅವರು ಸಭೆ ನಡೆಸಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪರಮೇಶ್ವರ್ ಸಭೆ ನಡೆಸಲಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಂಟಿಯಾಗಿ ಸಭೆ ನಡೆಸಲಿದ್ದಾರೆ. ಎಡಿಜಿಪಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಕಮಿಷನರ್ ಹಾಗು ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿರಲಿದ್ದಾರೆ.