ಮಂಗಳೂರು : ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಇಂದಿನಿಂದ ಮೇ.4 ರವರೆಗೆ ಮಂಗಳೂರು ನಗರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದಿನಾಂಕ: 01-05-2025 ರಂದು ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ನ ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀವ್ರ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಈ ಹಿನ್ನಲೆಯಲ್ಲಿ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಎಂಬುದಾಗಿ ಹಾಗೂ ಕೆಲವು ಸಮಾಜ ಘಾತುಕ ವ್ಯಕ್ತಿಗಳು ಮದ್ಯ ಸೇವಿಸಿ ಸಾರ್ವಜನಿಕ ಸೊತ್ತು ನಾಶ, ಹಲ್ಲೆ ಹಾಗೂ ದೊಂಬಿ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯನ್ನು ಉಂಟು ಮಾಡಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ತೊಂದರೆ ಮಾಡುವ ಸಾಧ್ಯತೆಯು ಇರುವುದರಿಂದ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಮಾದರಿಯ ಮದ್ಯ ಮಾರಾಟ ಕೇಂದ್ರಗಳನ್ನು ದಿನಾಂಕ:02.05.2025 ರಂದು ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ: 04.05.2025ರ ಬೆಳಿಗ್ಗೆ 06:00 ಗಂಟೆಯವರೆಗೆ ಮುಚ್ಚಲು ಆದೇಶಿಸುವಂತೆ ಉಲ್ಲೇಖದಂತೆ ಪೊಲೀಸ್ ಆಯುಕ್ತರು, ಮಂಗಳೂರು ನಗರ, ಮಂಗಳೂರು ಇವರು ಈ ಕಛೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.
ಮುಂದುವರೆದು, ಪೊಲೀಸ್ ಆಯುಕ್ತರು, ಮಂಗಳೂರು ನಗರ, ಮಂಗಳೂರು ಇವರ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಅಗತ್ಯತೆಯನ್ನು ಮನಗಂಡು ಈ ಕೆಳಗಿನಂತ ಆದೇಶಿಸಿದೆ.