ಮಂಗಳೂರು : ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಇಂದು ನಡೆಯುವ ಅಂತ್ಯಕ್ರಿಯೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಭಾಗಿಯಾಗಲಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಇದೀಗ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಹಿನ್ನೆಲೆಯಲ್ಲಿ ಮೇ 2 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಿಂದೂ ಸಂಘಟನೆಗಳು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮೇ 2 ರಿಂದ ಮೇ 6 ರವರೆಗೆ ನಗರದಲ್ಲಿ ಕಟ್ಟುನಿಟ್ಟಿನ ನಿಷೇಧಾಜ್ಞೆ ವಿಧಿಸಲಾಗಿದೆ.