ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಾ ಸಂಘ ಸಂತಾಪ ಸೂಚಿಸಿದ್ದು, ಡಾ.ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ಭಾರತ ಸದಾ ನೆನಪಿಸಿಕೊಳ್ಳುತ್ತದೆ ಎಂದು ಹೇಳಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂತಾಪ ವ್ಯಕ್ತಪಡಿಸಿದೆ. ಮನಮೋಹನ್ ಸಿಂಗ್ ಅವರ ನಿಧನದಿಂದ ಇಡೀ ದೇಶವೇ ದುಃಖಿತವಾಗಿದೆ ಎಂದು ಸಂಘ ಹೇಳಿದೆ. ಮನಮೋಹನ್ ಸಿಂಗ್ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದರು. ಅವರ ಕೊಡುಗೆ ಸದಾ ಸ್ಮರಣೀಯ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಅವರ ಕುಟುಂಬಕ್ಕೆ ಮತ್ತು ಅವರ ಹಲವಾರು ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಹೇಳಿದೆ.