ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇಂದು ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ.
ಶಾಮನೂರು ಶಿವಶಂಕರಪ್ಪನವರು ನಿಧನ ಹಿನ್ನೆಲೆ ಅವರ ಗೌರವಾರ್ಥವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಡಿಸೆಂಬರ್ 15 ರಂದು ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ ಡಿಸೆಂಬರ್ 27 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ.







