ಕೊಡಗು : ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಐತಿಹಾಸಿಕ ತಲಕಾವೇರಿಯ ಕಾವೇರಿ ತೀರ್ಥರೂಪಿಣಿಯಾಗಿ ತೀರ್ಥೋದ್ಭವದ ಮೂಲಕ ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಹಿಡಿದು ಆಗಮಿಸಿದ್ದು, ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ.
ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದಳು. ಮಡಿಕೇರಿ ತಾಲ್ಲೂಕಿನ ತಲಕಾವೇರಿಯಲ್ಲಿರುವ ಬ್ರಹ್ಮ ಕುಂಡಿಕೆಯಲ್ಲಿ ಭಕ್ತರಿಗೆ ದರ್ಶನ ತಾಯಿ ಕಾವೇರಿ ದರ್ಶನ ನೀಡಿದಳು. ಈ ಒಂದು ತೀರ್ಥೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣರಾಜ ದತ್ತ ಒಡೆಯರ್ ಅವರು ಸಹ ಭಾಗವಹಿಸಿದ್ದರು.