ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಎಸ್ ಐಟಿ ಅಧಿಕಾರಿಗಳು ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದಾರೆ. ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆಂದು ಪತ್ತೆ ಹಚ್ಚಿ ಬಂಧಿಸಲಿದೆ. ಕಾನೂನಿನ ಚೌಕಟ್ಟಿನಲ್ಲೇ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅವರನ್ನು ಕಾನೂನು ಪ್ರಕಾರವೇ ಎಸ್ ಐಟಿ ಬಂಧಿಸಿದೆ. ಯಾವ ರೀತಿ ತನಿಖೆ ಆಗುತ್ತದೆ ಎಂದು ಗೊತ್ತಿಲ್ಲ. ಮಾಹಿತಿ ಹೊರ ಬರಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.