ಬೆಂಗಳೂರು : ರಾಜ್ಯದಲ್ಲಿ ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲ್ ಸೇರಿಸುವ ವಿಚಾರದ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ನಲ್ಲಿ ಬಿಜೆಟ್ ಇದೆ. ಈ ವೇಳೆ ರಾಜ್ಯದಲ್ಲಿ ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲ್ ಸೇರಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು. ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲ್ ತಂದ್ರೆ ಲಾಭವಾಗುತ್ತಾ? ಇಲ್ವಾ? ರಾಜ್ಯಗಳಿಗೆ ಲಾಭವಾಗುವ ನಿಟ್ಟಿನಲ್ಲಿ ಕೇಂದ್ರ ಸಹಕಾರ ನೀಡಬೇಕು ಎಂದರು.
ಕೇಂದ್ರ ಸರ್ಕಾರ ಸಹಕಾರ ನೀಡಿದ್ರೆ ರಾಜ್ಯದಲ್ಲಿ ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲ್ ಸೇರಿಸಬಹುದು. ನಮಗೆ ತೊಂದರೆಯಾಗುತ್ತದೆ ಅಂದ್ರೆ ಯೋಚನೆ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.