ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಪ್ರಕರಣವನ್ನು ಸಿಐಡಿ ತನಿಖೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಈಗಾಗಲೇ ನಾನು ಈ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶ ನೀಡಿದ್ದೇನೆ. ತನಿಖೆಗೆ ಆದೇಶಿಸಿರುವುದರಿಂದ ಈ ಬಗ್ಗೆ ಹೆಚ್ಚು ಮಾತನಾಡಲ್ಲ. ಕೇಸ್ ತನಿಖೆ ನಡೆಯುತ್ತಿದ್ದು, ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ. ಪೊಲೀಸರು ತನಿಖೆ ಮಾಡಬೇಕಿದೆ. ಸಿ.ಟಿ.ರವಿ ತಾನು ಆ ಪದ ಬಳಸಿಲ್ಲ ಎನ್ನುತ್ತಿದ್ದಾರೆ ಎಂದರು.
ಈ ಪ್ರಕರಣದ ಬಗ್ಗೆ ಪೊಲಿಸರು ತನಿಖೆ ಮಾಡಿದ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ. ತನಿಖೆ ನಡೆಯುವಾಗ ಹೆಚ್ಚು ಮಾತನಾಡೋದು ಸರಿಯಲ್ಲ. ತನಿಖೆಯಾಗಲಿ ಎಂದು ಹೇಳಿದ್ದಾರೆ.