ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದ್ದು, ತನಿಖೆ ಬಳಿಕ ಪ್ರಕರಣದ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.
ಬೀದರ್ ನಲ್ಲಿ ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ರಾಜು ಕಪನೂರ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.