ದಕ್ಷಿಣ ಕನ್ನಡ : ಗೃಹಸಚಿವ ಜಿ. ಪರಮೇಶ್ವರ್ ಬುಧವಾರ ಕುಕ್ಕೆಯಲ್ಲಿ ತಮ್ಮ ಪತ್ನಿ ಜೊತೆಗೆ ವಿಶೇಷ ಪೂಜೆ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ.
ಹೌದು, ಕುಕ್ಕೆಯ ಬೆಳ್ಳಣ್ಣು ಸಮೀಪದ ದೇವಾಲಯದಲ್ಲಿ ಚಂಡಿ ಹೋಮ ಹಾಗೂ ಆಶ್ಲೀಲಾ ಬಲಿ ಪೂಜೆಯಲ್ಲಿ ಪರಮೇಶ್ವರ್ ದಂಪತಿಗಳು ಭಾಗವಹಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, ರಾಜ್ಯದ ಜನರ ಹಿತಕ್ಕಾಗಿ ಪ್ರಾರ್ಥಿಸಿ ಪೂಜೆಯಲ್ಲಿ ಪಾಲ್ಗೊಂಡಿರುವುದಾಗಿ ಹೇಳಿದರು.
ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಶೀಘ್ರವೇ 10-15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ.
ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ. ಮಂಗಳೂರಿನ ಎಸ್ ಪಿ ಕಚೇರಿ ಪುತ್ತೂರಿಗೆ ವರ್ಗಾಯಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.