ಬೆಂಗಳೂರು : ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಘೋಷಿಸಿದ್ದಾರೆ.
ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.
ಕೇಂದ್ರದಲ್ಲಿ ‘ಕಾಂಗ್ರೆಸ್’ ಅಧಿಕಾರಕ್ಕೆ ಬಂದರೆ ‘ಎಸ್ಪಿಪಿ’ ಕಾಯ್ದೆ ಜಾರಿ : ಸಿಎಂ ಸಿದ್ದರಾಮಯ್ಯ ಭರವಸೆ
ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.
‘ಉಕ್ರೇನ್’ ಯುದ್ಧ ಭೂಮಿಯಲ್ಲಿ ಭಾರತೀಯ ಬಲಿ : ‘ಕನ್ನಡಿಗರಲ್ಲಿ’ ಹೆಚ್ಚಾದ ಆತಂಕ