ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರಿತ ವಿಚಾರ ಭಾರೀ ಚರ್ಚೆಯಲ್ಲಿದ್ದು, ಈ ನಡುವೆ ಬೆಂಗಳೂರಿನಲ್ಲಿ ಮುಂದಿನ ಸಿಎಂ ಪರಮೇಶ್ವರ್ ಗೆ ಜೈ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಭಿಮಾನಿಗಳು ಘೋಷಣೆ ಕೂಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಸದಾಶಿವನಗರದಲ್ಲಿ ಅಹವಾಲು ಸ್ವೀಕರಿಸುತ್ತಿದ್ದ ವೇಳೆ ತುಮಕೂರಿನಿಂದ ಬಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಭಿಮಾನಿಗಳು, ಮುಂದಿನ ಮುಖ್ಯಮಂತ್ರಿ ಪರಮೇಶ್ವರ್ ಗೆ ಜೈ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಸಚಿವ ಪರಮೇಶ್ವರ್ ಅವರು ಅಭಿಮಾನಿಗಳಿಗೆ ಸುಮ್ಮನಿರುವಂತೆ ಗದರಿಸಿದ್ದಾರೆ.
ಮತ್ತೊಂದಡೆ ಸಚಿವ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಪೋಸ್ಟ್ ವೈರಲ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸತೀಶ್ ಜಾರಕಿಹೊಳಿ ಪರ ಅಭಿಯಾನ ಆರಂಭಿಸಿದ್ದಾರೆ.