ಬೆಂಗಳೂರು : ಪತಿಯೊಬ್ಬ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಮನನೊಂದು ಗೃಹಿಣಿ ಒಬ್ಬಳು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಗ್ರಹಿಣಿಯನ್ನು ಕಾವ್ಯ ಎಂದು ಹೇಳಲಾಗುತ್ತಿದ್ದು ಪತಿಯ ಅಕ್ರಮ ಸಂಬಂಧವೇ ಮಗಳ ಆತ್ಮಹತ್ಯೆಗೆ ಕಾರಣ ಎಂದು ಕಾವ್ಯ ಪೋಷಕರು ಆರೋಪಿಸುತ್ತಿದ್ದಾರೆ. ಈ ಸಂಬಂಧ ಪತಿ ಪ್ರವೀಣ್ ಸೇರಿದಂತೆ ನಾಲ್ವರ ವಿರುದ್ಧ ಕಾವ್ಯ ಪೋಷಕರು ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.
ಕಳೆದ ಎರಡು ವರ್ಷದ ಹಿಂದೆ ಅರ್ಧಕೆಜಿ ಚಿನ್ನಕೊಟ್ಟು, 50 ಲಕ್ಷ ಖರ್ಚು ಮಾಡಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದೆವು. ಇತ್ತಿಚೇಗೆ ಮೊಮ್ಮಗನ ಹುಟ್ಟುಹಬ್ಬ ನಡೆದಿತ್ತು ಎಂದು ಪೋಷಕರು ತಿಳಿಸಿದ್ದಾರೆ.
ಮೃತ ಕಾವ್ಯಳ ಪತಿ ಪ್ರವೀಣ್, ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದ. ಆದರೆ ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಆದರೆ ಅಳಿಯನ ಜೊತೆ ಹುಡುಗಿಯೊಬ್ಬಳ ಅಕ್ರಮ ಸಂಬಂಧವಿತ್ತು. ಹೆಂಡತಿ, ಮಗುವಿಗಿಂತ ಅವಳೇ ಅಳಿಯನಿಗೆ ಹೆಚ್ಚಾಗಿದ್ದಳು. ಈ ಬಗ್ಗೆ ಪ್ರಶ್ನೆ ಮಾಡಿದರೆ ತಂಗಿ ಎಂದು ಹೇಳಿದ್ದ. ಕುಟುಂಬಸ್ಥರೇ ಮೃತದೇಹವನ್ನು ಕೆಳಗಿಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆ ನಂತರ ಅಳಿಯನನ್ನ ನಮಗೆ ಒಪ್ಪಿಸುವಂತೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಮೃತ ಕಾವ್ಯಳ ಪತಿ, ಅತ್ತೆ, ಮಾವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಜೀಪ್ ಹತ್ತುತ್ತಿದ್ದ ವೇಳೆ, ಕಾವ್ಯಳ ಪತಿ, ಅತ್ತೆ, ಮಾವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಎನ್ನಲಾಗುತ್ತಿದೆ.