ಕಾರವಾರ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆ ಅವಾಂತರಕ್ಕೆ ರಾಷ್ಟ್ರೀಯ ಹೆದ್ದಾರಿಯಲಿ ಗುಡ್ಡ ಕುಸಿತ ಪರಿಣಾಮ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ಥವ್ಯಸ್ಥಗೊಂಡಿದೆ. ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ನಿರಂತರ ಮಳೆಗೆ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬಂದ್ ಆಗಿದ್ದು, ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ.
ಹೊನ್ನಾವರ ತಾಲೂಕಿನ ವರ್ನಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ಬೃಹತ್ ಬಂಡೆಗಳು ರಸ್ತೆ ಮೇಲೆ ಬಿದ್ದಿವೆ. ಹೊನ್ನಾವರ-ಸಾಗರ-ಬೆಂಗಳೂರು ರಸ್ತೆ ಸಂಪೂರ್ಣ ಬಂದ್ ಆಗಿದೆ. ಬೆಳಗ್ಗೆಯಿಂದಲೇ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.