ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಇನೋವಾ ಕಾರು ಹಾಗೂ ಟಂಟಂ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಒಂದು ಘಟನೆ ನಡೆದಿದೆ.
ಮಹೇಶ್ ನಾಯ್ಕರ್ (27) ಹಾಗೂ ಮಹಬೂಬ್ ಶೇಖ್ (30) ಮೃತ ದುರ್ದವಿಗಳು, ಇನ್ನು ಅಪಘಾತದಲ್ಲಿ ವಿಶಾಲ ವರತಿಲ್ಲೆ, ವಿಜಯಕುಮಾರ್ ಹಾಗೂ ಗುರುಪ್ರಸಾದ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಮೃತರು ಮತ್ತು ಗಾಯಾಳುಗಳು ನವನಗರದ 45 ನೇ ಸೆಕ್ಟರ್ ನಿವಾಸಿಗಳೇ ಆಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಘಟನೆಗೆ ಇನ್ನೋವಾ ಕಾರು ಚಾಲಕನ ಅಜಾಗರೂಕತೆ ಚಾಲನೆ ಕಾರಣ ಎಂದು ಹೇಳಲಾಗುತ್ತಿದೆ. ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನ್ ಡಿಕ್ಕಿ ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂ ಟಂ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.