ಬಾಗಲಕೋಟೆ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ, ಓವರ್ ಟೇಕ್ ಮಾಡಲು ಹೋಗಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು ಬಾಲಕರು ಲಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿತ್ತು. ಇದೀಗ ಬಾಗಲಕೋಟೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮರಳು ತುಂಬಿದ ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದಾನೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಮ್ಮಟಗೇರಿ ಘಟನೆ ನಡೆದಿದ್ದು ಬೈಕ್‌ನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವ್ಯಕ್ತಿ ನೀರಲಕೇರಿ ಗ್ರಾಮದ ನಿವಾಸಿ ಬೀರಪ್ಪ ಹಂಪಿಹೊಳ್ಳಿ (55) ಎಂದು ತಿಳಿದುಬಂದಿದೆ. ಕೆರೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.