ಬೆಂಗಳೂರು : ಬೆಂಗಳೂರಲ್ಲಿ ಭೀಕವಾದ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮುಖ್ಯಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಆಕಾಶವಾಣಿ ಸಮೀಪ ಈ ಒಂದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಶಾಲೆಕ ಮುಖ್ಯ ಶಿಕ್ಷಕ ಜಗದೀಶಯ್ಯ (57) ಸಾವನ್ನಪ್ಪಿದ್ದರೆ. ನೆಲಮಂಗಲದ ಬಸವನಹಳ್ಳಿ ಶಿಕ್ಷಕ ಜಗದೀಶಯ್ಯ ವಾಸವಾಗಿದ್ದರು.ಇಂದು ಮುಂಜಾನೆ ಕರ್ತವ್ಯಕ್ಕೆ ಹಾಜರಾಗಲು ಬರುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








