ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ಈ ಒಂದು ಅಪಘಾತ ನಡೆದಿದೆ.
ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಲಾರಿಯನ್ನು ಜಪ್ತಿ ಮಾಡಿ ಪೊಲೀಸರು ಚಾಲಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.