ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಬಳಿ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಲಾರಿ ಮಧ್ಯೆ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಟ್ಟಣದ ಕಜ್ಜಾಳ ಮಡ್ಡಿಯ ಶ್ರೀಶೈಲ ಹಾದಿಮನಿ(34), ತಾಲ್ಲೂಕಿನ ರಂಗಾಪುರ ಗ್ರಾಮದ ಸುರೇಶ ಮಾರಾಪುರ(32) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮೂಡಲಗಿ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.