ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸಿಮೆಂಟ್ ತುಂಬಿದ ಲಾರಿ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾಲಶಿರಗೂರು ಬಳಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು 5ನೇ ತರಗತಿಯ ಅಮಿತ್ ಕಾಂಬಳೆ (11) ಎಂದು ತಿಳಿದುಬಂದಿದೆ.
ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಹಾರೂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಚಿಯಿಂದ ಹಾರೂಗೇರಿ ಕಡೆಗೆ ಸಿಮೆಂಟ್ ಲಾರಿ ತೆರಳುತ್ತಿತ್ತು. ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಈ ವೇಳೆ ಲಾರಿಯ ಅಡಿ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾರಿ ಪಲ್ಟಿಯಾಗಿದೆ. ಈ ವೇಳೆ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಘಟನೆ ಅಂಜಲಿ ಕಾಂಬಳೆ (15) ಅವಿನಾಶ್ ಕಾಂಬಳೆ (14) ಸ್ಥಿತಿ ಗಂಭೀರವಾಗಿದೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








