ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಹೆಣ್ಣೂರು ಮತ್ತು ಬಾಗಲೂರು ಮುಖ್ಯ ರಸ್ತೆಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಅಂಗಡಿಗೆ ಹೋಗಿ ಮನೆಗೆ ವಾಪಸ್ ಬರುವಾಗ ಈ ಒಂದು ಅಪಘಾತ ಸಂಭವಿಸಿದೆ.
15 ವರ್ಷದ ಬಾಲಕ ವರುಣ್ ಎಂಬಾತ ದಾರುಣವಾಗಿ ಸಾವನಪ್ಪಿದ್ದಾನೆ. ಇಂದು ಬೆಳಿಗ್ಗೆ 9 ಗಂಟೆಗೆ ಅರುಣ್ ಅಂಗಡಿಗೆ ಎಂದು ಹೋಗಿದ್ದ ಬಳಿಕ ಮನೆಗೆ ಬರುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ನಡೆಯುತ್ತಿತ್ತುವಾಗ ಖಾಸಗಿ ಬಸ್ ಒಂದು ವೇಗವಾಗಿ ಬಂದು ವರುಣನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಆತ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.








