ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಕುರಿತು ನಿನ್ನೆ ತಾನೆ ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ ಮಾಡಿ ಅಧಿಕಾರಿಗಳಿಗೆ ಒಂದು ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಕಡಕ್ ಸೂಚನೆ ನೀಡಿದ್ದಾರೆ.ಇದರ ಬೆನ್ನಲ್ಲೆ, ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ಧನುಶ್ರೀ (22) ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ.
ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ವಿದ್ಯಾರ್ಥಿನಿ ಧನುಶ್ರೀ ರಸ್ತೆಯಲ್ಲಿ ಗುಂಡಿ ಇರುವುದರಿಂದ ಅದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗೆ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಟಿಪ್ಪರ್ ಹರಿದಿದೆ. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಸಂಚಾರಿ ಠಾಣೆ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.