ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರ ಅಪಘಾತವಾಗಿದ್ದು, ಬೆಂಗಳೂರು ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ. ಬೈಕಿಗೆ ಕೆ ಎಸ್ ಆರ್ ಟಿ ಸಿ ಬಸ್ ಹೆಡ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ.
ಮೃತ ವಿದ್ಯಾರ್ಥಿಗಳು ಪ್ರದೀಪ್ (20) ಹಾಗೂ ಭವಿಷ್ (21) ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ತಾಳಭಟ್ಟ ತಿರುವಿನಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರ ಮೃತ ದೇಹ ರವಾನೆ ಮಾಡಲಾಗಿದ್ದು, ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.