ದಾವಣಗೆರೆ : ದಾವಣಗೆರೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯ್ಕನ ಹಳ್ಳಿಯಲ್ಲಿ ನಡೆದಿದೆ.
ಮೃತ ಯುವತಿಯರನ್ನು ಪಲ್ಲವಿ ಹಾಗು ಸುಮಾ ಎಂದು ಗುರುತಿಸಲಾಗಿದೆ. ಒಂದೇ ಬೈಕ್ನಲ್ಲಿ ಪಲ್ಲವಿ, ಸುಮಾ ಹಾಗೂ ಸಚಿನ್ ಬರುವಾಗ ಕಾರು ಡಿಕ್ಕಿ ಹೊಡೆದಿದೆ. ಮೂವರು ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಪಲ್ಲವಿ ಮತ್ತು ಸುಮಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸಚಿನ್ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕುರಿತಂತೆ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.