ಧಾರವಾಡ : ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪರ ಜಿಲ್ಲಾಧಿಕಾರಿ ಸಿಡಿ ಗೀತಾ ಅವರ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಒಂದು ಡಿಕ್ಕಿ ಹೊಡೆದಿದೆ. ಆದರೆ ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಹೌದು ಧಾರವಾಡ ಅಪರ ಜಿಲ್ಲಾಧಿಕಾರಿ ಸಿ.ಡಿ ಗೀತಾ ಅವರ ಕಾರು ಅಪಘಾತವಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬಸೂರು ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.ಅಪರ ಜಿಲ್ಲಾಧಿಕಾರಿ ಗೀತಾ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಯಾವುದೇ ರೀತಿಯಾದ ಪ್ರಾಣಪಾಯ ಸಂಭವಿಸಿಲ್ಲ. ಮಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ ಲಾಡ್ ಅವರ ಜೊತೆಗೆ ಅಪರ ಜಿಲ್ಲಾಧಿಕಾರಿ ಗೀತಾ ಅವರು ಮಳೆ ಹಾನಿ ಪ್ರದೇಶ ಪರಿಶೀಲಿಸುವ ಬರುವಾಗ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.