ಹಾಸನ : ಹಾಸನದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಮೃತನನ್ನು ಬಿಹಾರ ಮೂಲದ ಬರಿಕುಲ್ (18) ಎಂದು ಗುರುತಿಸಲಾಗಿದೆ.
ಅವಘಡದಲ್ಲಿ ಸಲೀಂ (17) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಕಂಬವೇರಿ ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರ್ಮಿಕರಿಗೆ ಶಾಕ್ ಹೊಡೆಯುತ್ತಿದ್ದಂತೆ ಇನ್ನುಳಿದ ಮೂರು ಕಾರ್ಮಿಕರು ಅಲ್ಲಿಂದ ಓಡಿ ಹೋಗಿದ್ದಾರೆ.ಗಾಯಗೊಂಡ ಯುವಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








