ಮಂಡ್ಯ : ಮಂಡ್ಯದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮಂಡ್ಯ ಜಿಲ್ಲೆಯ ಕಾರು ಚಾಲಕ ಗೋವಿಂದರಾಜು ಹಾಗೂ ಅಶೋಕ್ ಸ್ಥಳದಲ್ಲಿ ಸಾವನಪ್ಪಿದ್ದರೆ, ಇನ್ನೂ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.








