ಮಂಡ್ಯ : ಮಂಡ್ಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಒಂದಕ್ಕೆ KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಂಚೆ ಬೀರನಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಬೈಕ್ನಲ್ಲಿದ್ದಂತಹ ಉಮೇಶ್ (24) ಹಾಗು ದಿನೇಶ್ (24) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಚಾಲಕನ ಜಾಗರೂಕತೆಯಿಂದ ಈ ಒಂದು ಅಪಘಾತ ಸಂಭವಿಸಿದೆ ಘಟನೆ ಸಂಭಂದ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.