ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರ ಸಾವನ್ನಪ್ಪಿದ್ದರೆ. ಯರಗನಹಳ್ಳಿ ಕೆರೆಯಲ್ಲಿ ಘಟನೆ ನಡೆದಿದ್ದು, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಯರಗನಹಳ್ಳಿಯಲ್ಲಿ ನಡೆದಿದೆ.
ಪ್ರಕಾಶ್ ಗೌಡ (24) ಯಶಸ್(23) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮೃತರಿಬ್ಬರು ನಿನ್ನೆ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿ ದುರ್ಘಟನೆ ಸಂಭವಿಸಿದೆ. ಇಂದು ಮೃತ ಯುವಕರಿಬ್ಬರ ಮೃತದೇಹ ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯ ಸ್ವಾಮಿ ಭೇಟಿ ನೀಡಿದ್ದು ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








