ಮಂಗಳೂರು : ಇಂದು ಮಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಖಾಸಗಿ ಬಸ್ ಗಳ ಮಧ್ಯ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಬಸ್ ನಲ್ಲಿದ್ದ 14 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರು ನಗರ ವಲಯದ ಚೇಳ್ಯಾರು ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಅಪಘಾತಕ್ಕೆ ಅತಿ ವೇಗ ಚಾಲನೆ ಹಾಗೂ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗುತ್ತಿದೆ. ಬಸ್ ನಲ್ಲಿದ್ದ ಕಾಲೇಜಿನ 7 ವಿದ್ಯಾರ್ಥಿಗಳು ಸೇರಿ 14 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ತಕ್ಷಣ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಕೆ.ರವಿಶಂಕರ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.