ಮೈಸೂರು : ಓನಡಿ ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿದೆ ಇನ್ನೊಂದು ಕಡೆ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು ಇದರಿಂದ ಅನೇಕರು ಬಿಳಿ ಆಗುತ್ತಿದ್ದಾರೆ ಇದೀಗ ಮೈಸೂರಿನಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಮತ್ತೋರ್ವನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನಲ್ಲಿ ನಡೆದಿದೆ.
ಮರಕ್ಕೆ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದು, ಸಾಲಿಗ್ರಾಮ ತಾಲೂಕಿನ ಬೈಲಾಪುರ ಎಂಬ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಖಲೀಮ್ ರೆಹಮಾನ್ (65) ಹಾಗು ಶೇಖ್ ಅಬ್ದುಲ್ಲಾ ಖಾದರ್ (45) ಸಾವನಪ್ಪಿದ್ದಾರೆ. ಮೃತರು ಹಾಸನದ ಲಕ್ಷ್ಮಿಪುರಂ ಬಡಾವಣೆಯ ನಿವಾಸಿಗಳು ಎಂದು ತಿಳಿದು ಬಂದಿದೆ.
ಇನ್ನು ಕಾರಿನಲ್ಲಿದಂತಹ ಮತ್ತೋರ್ವ ವ್ಯಕ್ತಿ ಶೇಕ್ ಮುನಿರ್ ಅಹಮದ್ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಈ ಒಂದು ಅಪಘಾತ ಸಂಭವಿಸಿದೆ. ಬೈಲಾಪುರ ಗ್ರಾಮದ ಬಳಿ ಪೈಪ್ ಹಾಕಲು ತೆಗೆದಿದ್ದ ಹಳ್ಳವನ್ನು ಮುಚ್ಚಿರಲಿಲ್ಲ. ಅದೇ ಸ್ಥಳದಲ್ಲಿ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಈ ಒಂದು ಕಾರು ಹಾಸನದಿಂದ ಚುಂಚನಕಟ್ಟೆ ಕಡೆಗೆ ತೆರಳುತ್ತಿತ್ತು. ಸದ್ಯ ಘಟನಾ ಸ್ಥಳಕ್ಕೆ ಸಾಲಿಗ್ರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.