ಉತ್ತರಕನ್ನಡ : ಖಾಸಗಿ ಬಸ್ ಹಳ್ಳಕ್ಕೆ ಬಿದ್ದು ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಸುಮಾರು 18 ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಗಸೂರು ಗ್ರಾಮದಲ್ಲಿ ಖಾಸಗಿ ಬಸ್ ಹಳ್ಳಕ್ಕೆ ಉರುಳಿದ ಪರಿಣಾಮ, ಬಸ್ ನಲ್ಲಿ ಸಿಲುಕಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. 25 ಪ್ರಯಾಣಿಕರ ಪೈಕಿ 18 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದು ಈ ಒಂದು ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಂಕೋಲ ಪಿಎಸ್ಐ ಉದ್ದಪ್ಪ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿಯ ಮಾರ್ಗವಾಗಿ ಖಾಸಗಿ ಬಸ್ ಮಂಗಳೂರು ಕಡೆಗೆ ಸಾಗುತ್ತಿತ್ತು. ಅಂಕೋಲ ತಾಲೂಕಿನ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.