ಉತ್ತರಕನ್ನಡ : ರಾಜ್ಯದಲ್ಲಿ ತಡರಾತ್ರಿ ಭೀಕರವಾದ ಅಪಘಾತ ಸಂಭವಿಸಿದ್ದು ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ದು 7 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಹೌದು ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದರೆ. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಗಲಕೋಟೆಯಿಂದ ಕೆಎಸ್ಆರ್ಟಿಸಿ ಬಸ್ ಮಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ನಲ್ಲಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ.
ಈ ಒಂದು ಅಪಘಾತದಲ್ಲಿ ನೀಲವ್ವ ಹರದೋಳಿ (40) ಗಿರಿಜವ (30) ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಗಲಕೋಟೆಯಿಂದ ಮಂಗಳೂರು ಕಡೆಗೆ ಕೆ ಎಸ್ ಆರ್ ಟಿ ಸಿ ಬಸ್ ತೆರಳುತ್ತಿತ್ತು. ಲಾರಿಗೆ KA 19 ಫ್ 3470 ನಂಬರ್ನ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ಬಾಗಲಕೋಟೆ ಮೂಲದವರು ಎಂದು ತಿಳಿದು ಬಂದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.