ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಒಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಹೌದು ಬೆಳಗಾವಿ ಜಿಲ್ಲೆಯ ಹಿರೇ ಬಾಗೇವಾಡಿಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿದೆ. ಈ ಒಂದು ಬಸ್ ಹುಬ್ಬಳ್ಳಿಯಿಂದ ಪುಣೆಗೆ ತೆರಳುತ್ತಿತ್ತು. ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.