ವಿಜಯನಗರ : ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದಂತಹ ಇಬ್ಬರು ಅರಣ್ಯ ಸಿಬ್ಬಂದಿಗಳು ಸ್ಥಳದಲ್ಲೇ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಇಂದು ನಡೆದಿದೆ.
ಬೋಲೇರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಕಮಲಾಪುರದ ಕೃಷ್ಣ (26) ಹಾಗೂ ವೆಂಕಟಪುರದ ಹನುಮಂತಪ್ಪ (50) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ರಾತ್ರಿ ಪಾಳಿಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೆಲಸ ಮಾಡುತ್ತಿದ್ದರು.
ಈ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಮೃತರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು ಸದ್ಯ ಗೂಡ್ಸ್ ವಾಹನ ಹಿಡಿದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಂಪಿ ಸಿಪಿಐ ರಾಜೇಶ್ ಬಟಕುರ್ಕಿ ಭಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








