ಬೆಂಗಳೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಈ ಒಂದು ಘಟನೆ ನಡೆದಿದೆ.
ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಉಸಿರು ಚೆಲ್ಲಿದರೆ ಓರ್ವನ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಆಸ್ಪತ್ರೆ ಗಾಯಾಳುವನ್ನು ರವಾನಿಸಲಾಗಿದೆ. ಮೈಸೂರು ನಿಂದ ಕಾರು ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿದ್ದರೆ ಓರ್ವನ ಸ್ಥಿತಿ ಗಂಭೀರವಾಗಿದೆ.ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.