ಉಡುಪಿ : ಉಡುಪಿಯಲ್ಲಿ ಘೋರ ಕೃತ್ಯ ನಡೆದಿದ್ದು, ಹುಟ್ಟುಹಬ್ಬದ ದಿನವೇ ಯುವತಿಗೆ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಕೊಕರ್ಣಿಯಲ್ಲಿ ನಡೆದಿದೆ.
ಚಾಕು ಇರಿತಕ್ಕೆ ಒಳಗಾದ ಯುವತಿಯನ್ನು ರಕ್ಷಿತಾ ಪೂಜಾರಿ (25) ಎಂದು ತಿಳಿದುಬಂದಿದೆ. ಪಕ್ಕದ ಮನೆಯ ನಿವಾಸಿ ಕಾರ್ತಿಕ್ ಎಂಬ ಯುವಕ ಚಾಕು ಇರಿದು ಪರಾರಿಯಾಗಿದ್ದಾನೆ.ಗಾಯಗೊಂಡ ರಕ್ಷಿತಾಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದುವೆಗೆ ಆಕ್ಷೇಪ ಬಂದ ಕಾರಣ ರಕ್ಷಿತಾ ಕಾರ್ತಿಕ್ ನಂಬರ್ ಬ್ಲಾಕ್ ಮಾಡಿದ್ದಳು. ಈ ಕಾರಣಕ್ಕೆ ಚಾಕು ಇರಿದು ಆರೋಪಿ ಕಾರ್ತಿಕ್ ಪರಾರಿಯಾಗಿದ್ದಾನೆ. ಬ್ರಹ್ಮವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.