ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಆನೇಪಾಳ್ಯ ಬಸ್ ನಿಲ್ದಾಣದ ಬಳಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಓವರ್ ಸ್ಪೀಡ್ ನಿಂದಾಗಿ ರಸ್ತೆಯ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಸಹೋದರರು ನೀಲಸಂದ್ರ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಬ್ಬರು ಹೆಲ್ಮಟ್ ಹಾಕದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.