ನವದೆಹಲಿ : ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಇ-ಚಾರ್ಜರ್ ಸ್ಟೇಷನ್ ನಲ್ಲಿ ಬೆಂಕಿ ಬಿದ್ದ ಪರಿಣಾಮ ಇಬ್ಬರು ವ್ಯಕ್ತಿಗಳು ಸಜೀವ ದಹನ ಹೊಂದಿರುವ ಘಟನೆ ಶಹದಾರ ಪ್ರದೇಶದ ಮೋತಿ ರಾಮ್ ರಸ್ತೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ದೆಹಲಿಯ ಶಹದಾರಾ ಪ್ರದೇಶದಲ್ಲಿ ಇಂದು ಇ-ಚಾರ್ಜಿಂಗ್ ಸ್ಟೇಷನ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಿಗ್ಗೆ 6:40 ರ ಸುಮಾರಿಗೆ ಶಹದಾರಾದ ಮೋತಿ ರಾಮ್ ರಸ್ತೆಯ ಬಳಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಇಲಾಖೆಗೆ ಕರೆ ಬಂದಿದ್ದು, ಸುಮಾರು ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಬೆಳಿಗ್ಗೆ 8:30 ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.ಅಗ್ನಿಶಾಮಕ ಇಲಾಖೆಯ ಪ್ರಕಾರ, ಸ್ಥಳದಿಂದ ಎರಡು ಸುಟ್ಟ ಶವಗಳನ್ನು ಹೊರತೆಗೆಯಲಾಗಿದೆ ಮತ್ತು ನಾಲ್ವರು ಗಾಯಗೊಂಡವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.